ಬೆಂಗಳೂರು : “ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
“ ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ” ಎಂದು ಬರೆದುಕೊಳ್ಳುವ ಮೂಲಕ ‘ಜೆಡಿಎಸ್ ಅವಕಾಶವಾದಿ ಪಕ್ಷ ‘ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನಿಡಿದ್ದಾರೆ.
ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಹೇಳಿದರು.