ರಾಮನಗರ : ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ದಿನ ಬರುತ್ತದೆ ಎಂದು ನಂಜಾವಧೂತ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಚನ್ನಪಟ್ಟಣದ ದೊಡ್ಡಮಳೂರಿನಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಕುಮಾರಸ್ವಾಮಿ ಮಾತ್ರ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರು ಮಾಡಿದ ಕೆಲಸ ಕಾರ್ಯಗಳು ಸರಿಯಾಗಿ ಪ್ರಚಾರವಾಗಲಿಲ್ಲ. ಕುಮಾರಸ್ವಾಮಿ ಅವರು ಮತ್ತೆ ಸಿಎಂ ಆಗ್ತಾರೆ ಎಂದರು.
ಈಗ ರಾಜ್ಯದಲ್ಲಿ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ. ಅವರೂ ಕೂಡ ಒಳ್ಳೆಯ ಕೆಲಸಗಳನ್ನ ಮಾಡಬೇಕಿದೆ. ಯಡಿಯೂರಪ್ಪ ಸರ್ಕಾರಕ್ಕೆ ಕುಮಾರಸ್ವಾಮಿ ಯಾವ ತೊಂದರೆಯನ್ನೂ ಮಾಡುವುದಿಲ್ಲ ಎಂದು ನಂಜಾವಧೂತರು ಅಭಿಪ್ರಾಯಪಟ್ಟರು.








