ಕೇಂದ್ರದ ಕೈಗಾರಿಕಾ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ, ವಿಶೇಷವಾಗಿ ಬೆಂಗಳೂರು ನಗರಕ್ಕೆ ಬೃಹತ್ ಸಿಹಿ ಸುದ್ದಿ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಎಲೆಕ್ಟ್ರಿಕ್ ಬಸ್ ಹಂಚಿಕೆ ಕುರಿತು ಮಹತ್ವದ ಸಭೆಯಲ್ಲಿ ಅವರು ಭಾಗವಹಿಸಿದ್ದು, ರಾಜ್ಯದ ಸಾರಿಗೆ ಕ್ಷೇತ್ರಕ್ಕೆ ಹೊಸ ಘೋಷಣೆಯನ್ನು ಮಾಡಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದಂತೆ, ಪಿಎಂ ಇ-ಡ್ರೈವ್ (PM e-Drive) ಯೋಜನೆಯ ಮೊದಲ ಹಂತದಲ್ಲಿ ದೇಶದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಪೈಕಿ ಬೆಂಗಳೂರಿಗೆ ಅತೀ ಹೆಚ್ಚು ಸಂಖ್ಯೆಯಲ್ಲಿ – 4,500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗುವುದು.
ಈ ಘೋಷಣೆಯ ಹಿನ್ನೆಲೆಯಲ್ಲಿ, ಇಂಧನದ ಭಾರದಿಂದ ಬಳಲುತ್ತಿರುವ ನಗರ ಸಾರಿಗೆ ವ್ಯವಸ್ಥೆಗೆ ಒಂದಿಷ್ಟು ಸೌಲಭ್ಯ ಸಿಗಲಿದೆ. ಕೇಂದ್ರ ಸಚಿವರ ಸಭೆಯಲ್ಲಿ ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ದೆಹಲಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲಾ ರಾಜ್ಯಗಳಿಗೂ ಎಲೆಕ್ಟ್ರಿಕ್ ಬಸ್ ಹಂಚಿಕೆ ಸಂಬಂಧ ತಂತ್ರ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.








