ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರು ಸರಿಯಾಗಿ ಊಟ ಮಾಡುವುದಿಲ್ಲ. ಅವರು ಮಕ್ಕಳಂತೆ ಹಠ ಮಾಡುತ್ತಾರೆ ಎಂದು ಪತ್ನಿ ಅನಿತಾ ಕುಮಾರಸ್ವಾಮಿ (Anita Kumaraswamy) ಹೇಳಿದ್ದಾರೆ.
ಹೆಚ್ಡಿಕೆ ಅವರ ಆರೋಗ್ಯ (Health)ದ ಕುರಿತು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡುತ್ತಾರೆ. ಮೊಸರನ್ನ ಹೆಚ್ಚು ತಿನ್ನುತ್ತಾರೆ. ಹೆಚ್ಚು ನೀರು ಕುಡಿಯಲ್ಲ, ಸರಿಯಾಗಿ ಊಟ ಮಾಡಲ್ಲ. ಹೀಗಾಗಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿ ಒಂದು ದಿನ ಚಿಕಿತ್ಸೆ ಪಡೆದಿದ್ದಾರೆ. ಸ್ವಲ್ಪ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ (Channapatna Constituency) ಹೆಚ್ಡಿಕೆ ಪರ ಪ್ರಚಾರ ಮಾಡಿದ ಅನಿತಾ ಕುಮಾರಸ್ವಾಮಿ, ಕ್ಷೇತ್ರದ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಕ್ಷೇತ್ರದ ಜನರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಇಲ್ಲಿನ ಜನ ಬುದ್ಧಿವಂತರಾಗಿದ್ದು, ಕುಮಾರಸ್ವಾಮಿ ಅವರನ್ನು ಅರ್ಥ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಸಿಎಂ ಕ್ಯಾಂಡಿಡೇಟ್, ಅವರನ್ನು ಗೆಲ್ಲಿಸಿದರೆ ಕ್ಷೇತ್ರಕ್ಕೆ ಅನ್ ಲಿಮಿಟೆಡ್ ಅನುದಾನ ಸಿಗಲಿದೆ. ಮತ್ತಷ್ಟು ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಹೇಳಿದ್ದಾರೆ.