ಹೆಚ್.ಡಿ.ಕುಮಾರಸ್ವಾಮಿಗೆ ನಾಲಿಗೆ ಮೇಲೆ ಹಿಡಿತವಿಲ್ಲ : ಬಿ.ಸಿ.ಪಾಟೀಲ್ HD Kumaraswamy saaksha tv
ದಾವಣಗೆರೆ : ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಪಕ್ಷ ಸಂಘಟನೆ ಮಾಡೋದಕ್ಕೆ ಬಂದವರನ್ನ ಹಣ ಪಡೆಯಲು ಬಂದವರು ಎಂದು ಹೇಳುವುದು ಅರ್ಥಹೀನ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿ, ಇವತ್ತು ನಮ್ಮ ಗೃಹ ಮಂತ್ರಿಗಳು ಜಿಲ್ಲೆಗೆ ಬಂದಿದ್ದಾರೆ. ಅದಕ್ಕೆ ನಾವು ಬಂದಿದ್ದೇವೆ.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಸದ್ಯಕ್ಕೆ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
ಇದೇ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ.ಬಿ. ಪಾಟೀಲ್ ಒಮ್ಮೆ ಕೈ ಸುಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಿದ್ದರು.
ಇದೀಗ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಕೈ ಹಾಕಿದ್ರೆ ಪಕ್ಷ ಸರ್ವನಾಶ ಆಗುತ್ತೆ ಎಂದರು.