ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಈ ಬಗ್ಗೆ ಅವರೇ ಸ್ವತಃ ಟ್ವೀಟ್ ಮಾಡಿ ತಿಳಿಸಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ ಪರಿಣಾಮ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಪಾಸಿಟಿವ್ ವರದಿ ಬಂದಿದೆ.