ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರೈತರ ಸಮ್ಮುಖದಲ್ಲೇ ಕುಳಿತು ಬಿಡದಿ ಸಮಸ್ಯೆ ಬಗ್ಗೆ ಚರ್ಚೆ ನಡೆಸಲು ನಾನು ಈಗಲೂ ಸಿದ್ಧ. ಮುಖ್ಯಮಂತ್ರಿಗಳು ಬಂದರೆ ನಾನೂ ಬರುತ್ತೇನೆ ಎಂದು ಹೇಳಿದ್ದಾರೆ.
ಬಿಡದಿ ರೈತರ ಸಮಸ್ಯೆಗಳ ಕುರಿತು ತಾವು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ, ಇದುವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ರೈತರ ನಡುವೆ ಕುಳಿತು ನೇರವಾಗಿ ಅವರ ಅಭಿಪ್ರಾಯ ಕೇಳೋಣ ಎಂದು ಕರೆದರೂ ಅವರು ಬಂದಿಲ್ಲ. ಬಿಡದಿ ಸಮಸ್ಯೆಗೆ ಸಂಬಂಧಿಸಿದಂತೆ ಅಲ್ಲಿಯೇ ರೈತರೊಂದಿಗೆ ಚರ್ಚೆ ನಡೆಸಬೇಕು. ಅದನ್ನು ಬಿಟ್ಟು ಪ್ರತಿಭಟನೆಗಳನ್ನು ಮಾಡಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆ ಕುರಿತಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದ್ದು, ಈ ವಿಷಯ ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯಾಗಿ ಉಳಿದಿದೆ.







