Karnataka Politics : ರಾಮನಗರದಲ್ಲಿ ಕಾಂಗ್ರೆಸ್ ಬೇರೂರಲು ಸಾಧ್ಯವಿಲ್ಲ, ಬೇರೂರಲು ಬಿಡುವುದಿಲ್ಲ : ಹೆಚ್ ಡಿ ಕುಮಾರಸ್ವಾಮಿ
ರಾಮನಗರ: ರಾಮನಗರದಲ್ಲಿ ಕಾಂಗ್ರೆಸ್ ಬೇರೂರಲು ಸಾಧ್ಯವಿಲ್ಲ.. ಯಾವುದೇ ಕಾರಣಕ್ಕೂ ಇಲ್ಲಿ ಕಾಂಗ್ರೆಸ್ ಬೇರೂರಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ..
ರಾಮನಗರದಲ್ಲಿ ಮಾತನಾಡಿದ ಅವರು, ಅಧಿವೇಶನ ಬಳಿಕ ರಾಮನಗರದ ಪ್ರತಿ ಹಳ್ಳಿಹಳ್ಳಿಗೂ ಭೇಟಿ ನೀಡಿ, ಖುದ್ದು ಜನರ ಬಳಿ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚಿಸುವೆ.
ದೇವೇಗೌಡರ ಕುಟುಂಬಕ್ಕೂ ರಾಮನಗರ ಕ್ಷೇತ್ರಕ್ಕೂ ತಾಯಿ ಮಗುವಿನ ಸಂಬಂಧವಿದೆ. ಮಗುವನ್ನು ಬೆಳೆಸಿದ ತಾಯಿಯೇ ಮಗುವಿನ ರಕ್ಷಣೆ ಮಾಡುತ್ತಾಳೆ. ಯಾವುದೇ ಕಾರಣಕ್ಕೂ ಮಗುವಿಗೆ ತೊಂದರೆಯಾಗಲು ಬಿಡಲ್ಲ. ರಾಮನಗರ ಕ್ಷೇತ್ರದ ಜನರ ಮೇಲೆ ಅಚಲವಾದ ವಿಶ್ವಾಸ ನನಗಿದೆ ಎಂದಿದ್ದಾರೆ..