Karnataka Politics : ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ , ಅದು ನನ್ನ ಕರ್ಮ ಭೂಮಿ : ಹೆಚ್ ಡಿ ಕುಮಾರಸ್ವಾಮಿ
ರಾಮನಗರ : ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ… ಈ ಮೂಲಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಗುಮಾನಿಗೆ ತೆರೆ ಎಳೆದಿದ್ದಾರೆ…
ಅಲ್ಲದೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತೇನೆ ಎಂದಿದ್ದ ಅವರ ಈ ಹಿಂದಿನ ಹೇಳಿಕೆಗೆ ಸ್ಪಷ್ಟನೆ ನೀಡಿ , ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅಂತ ಕಾರ್ಯಕರ್ತರು ಕೇಳಿದ್ರು… ನಾನೇ ಬರುತ್ತೇನೆ ಎಂದು ಕಾರ್ಯಕರ್ತರಿಗೆ ಹೇಳಿದ್ದೆ.. ಹಾಗಂತ ಚುನಾವಣೆ ನಿಲ್ಲುತ್ತೇನೆ ಎಂಬ ಅರ್ಥ ಅಲ್ಲ ಎಂದಿದ್ದಾರೆ…
ಇನ್ನೂ ನನ್ನ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಿಕೊಂಡರೆ ನಾನೇನು ಮಾಡಲು ಸಾಧ್ಯ… ರಾಮನಗರ ನನ್ನ ಕರ್ಮ ಭೂಮಿ. ರಾಜಕೀಯವಾಗಿ ನನಗೆ ಜನ್ಮ ನೀಡಿದ ಕ್ಷೇತ್ರ. ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟುಕೊಡಲ್ಲ. ಕ್ಷೇತ್ರವನ್ನು ಬೇರೆ ಪಕ್ಷಗಳ ಪಾಲಾಗಲು ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ..