ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H.D.K: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿ : ಹೆಚ್.ಡಿ.ಕೆ

Vivek Biradar by Vivek Biradar
April 18, 2022
in Newsbeat, Politics, ರಾಜಕೀಯ
Siddaramaih Kumaraswamy Saaksha Tv
Share on FacebookShare on TwitterShare on WhatsappShare on Telegram

ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿ : ಹೆಚ್.ಡಿ.ಕೆ

ಬೆಂಗಳೂರು: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಪಕ್ಷನಾಯಕ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಸರಣಿ ಟ್ವೀಟ್ ಮಾಡಿದ ಅವರು ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ ಎಂದು ವ್ಯಂಗ್ಯವಾಡಿದ್ದಾರೆ.

ಅಲ್ಲದೇ ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ʼಮೆಂಟ್‌ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? 2008-2009; ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಂದು ಚಾಟಿ ಬೀಸಿದ್ದಾರೆ.

ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ. 1/14

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 18, 2022

ಹಾಗೇ ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ? ಧೈರ್ಯವಿ ದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ ಎಂದು ಹೇಳಿದರು.

ಪಾಪ.. ಕಾಂಗ್ರೆಸ್!! ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ ಎಂದು ಕಾಲೆಳೆದಿದ್ದಾರೆ.

“ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು” ಎಂದಿದ್ದು ಯಾರಪ್ಪಾ? ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ? ಎಂದು ಪ್ರಶ್ನಿಸಿದರು.

ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ. ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ?

2018ರಲ್ಲಿ ಒಳ್ಳೇ ಆಡಳಿತ ನಡೆಸಲೆಂದು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟೆವು ಎಂದಿದ್ದೀರಿ. ಆ ಮುನ್ನ 5 ವರ್ಷ ಕೆಟ್ಟ ಆಡಳಿತ ಕೊಟ್ಟೆ ಎಂದು ನೀವೇ ಒಪ್ಪಿಕೊಂಡ ಹಾಗಾಯಿತಲ್ಲ. ಜೆಡಿಎಸ್ 30 ಸೀಟಿನ ಪಕ್ಷವಲ್ಲ,123 ಕ್ಷೇತ್ರಗಳ ಸವಾಲು ಸ್ವೀಕರಿಸಿ ಹೊರಟ ಪಕ್ಷ. ಇದು ಗೊತ್ತಾಗಿಯೇ ಪಕ್ಷವಾತ ಬಂದ ಹಾಗೆ ನೀವು ಚಡಪಡಿಸುತ್ತಿದ್ದೀರಿ!! ಎಂದು ಗುಡುಗಿದರು.

ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ ಹ್ಯೂಬ್ಲೆಟ್ ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ? ಎಂದು ಕಿಚಾಯಿಸಿದರು.

ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ? ಎಂದು ಹೇಳಿದರು.

ನಿಮ್ಮ ಕತ್ತಲೆ ಮುಖವಾಡ & ʼಪರ್ಸಂಟೇಜ್ ಪಲ್ಲಕ್ಕಿʼಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ ಎಂದು ಕಿಡಿಕಾರಿದರು.

Tags: #Saaksha TVCongressH D KUMARASWAMYJDSSiddaramaiah
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram