ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ : ಹೆಚ್ ಡಿ ಕುಮಾರಸ್ವಾಮಿ HD Kumaraswamy saaksha tv
ಬೆಂಗಳೂರು : ನಾನು ಈ ಮೊದಲೇ ಹೇಳಿದಂತೆ; “ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ.
ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ.
ಅವರ ಸ್ಪೂರ್ತಿ ಎಂದೆಂದಿಗೂ ನಮ್ಮೊಂದಿಗೇ ಇರುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಹೆಚ್ ಡಿ ಕುಮಾರಸ್ವಾಮಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಬಹುಮುಖ ಪ್ರತಿಭೆ, ತಮ್ಮ ಇಡೀ ಬದುಕನ್ನು ಕನ್ನಡ ಸಿನಿಮಾಕ್ಕೆ ಮೀಸಲಿಟ್ಟು, ಈಚೆಗೆ ನಮ್ಮನ್ನು ಅಗಲಿದ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದು ಅರ್ಥಪೂರ್ಣ ಹಾಗೂ ನಿಜವಾದ ಗೌರವ ಎಂದು ಬರೆದುಕೊಂಡಿದ್ದಾರೆ.









