ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hala Controversy: ಸರಣಿ ಟ್ವೀಟ್ ಮೂಲಕ ಹಲಾಲ್ ವಿರುದ್ಧ ಕಿಡಿ ಕಾರಿದ ಮಾಜಿ ಸಿಎಂ

Vivek Biradar by Vivek Biradar
April 2, 2022
in Newsbeat, State, ರಾಜ್ಯ
Kumarswamy Saaksha Tv
Share on FacebookShare on TwitterShare on WhatsappShare on Telegram

ಸರಣಿ ಟ್ವೀಟ್ ಮೂಲಕ ಹಲಾಲ್ ವಿರುದ್ಧ ಕಿಡಿ ಕಾರಿದ ಮಾಜಿ ಸಿಎಂ

ಬೆಂಗಳೂರು: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ ಮಾಡೋಣ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

February 17, 2026
ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

February 17, 2026

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ ಎಂದು ಕಿವಿಮಾತು ಹೇಳಿದರು.

ಇನ್ನೂ ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಅಲ್ಲದೇ ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ ಎಂದರು.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ ಎಂದು ಹೇಳಿದ್ದಾರೆ

ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Tags: #Saaksha TVHala ContoversyHD Kumarswamy
ShareTweetSendShare
Join us on:

Related Posts

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

by Shwetha
February 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್) ಆರ್ಥಿಕ ಮೂಲ ಯಾವುದು, ಅದಕ್ಕೆ ವಿದೇಶದಿಂದ ಹಣ ಬರುತ್ತದೆಯೇ ಮತ್ತು ಸಂಘವು ತೆರಿಗೆ ಪಾವತಿಸುತ್ತದೆಯೇ ಎಂದು ಪ್ರಶ್ನಿಸಿದ್ದ ಸಚಿವ ಪ್ರಿಯಾಂಕ್...

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

by Shwetha
February 17, 2026
0

ಬೆಂಗಳೂರು: ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯಾದ ಜನ ಗಣ ಮನಕ್ಕೆ ಸರಿಸಮಾನವಾದ ಸ್ಥಾನಮಾನ ನೀಡಲು ಹೊರಟಿರುವ ಕೇಂದ್ರ ಸರಕಾರದ ಕ್ರಮವು ರಾಷ್ಟ್ರಗೀತೆಯ ಘನತೆ ಹಾಗೂ ಸಂವಿಧಾನಾತ್ಮಕ ಸ್ಥಾನಮಾನವನ್ನೇ...

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

by Shwetha
February 17, 2026
0

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಫೆಬ್ರವರಿ 16ರಿಂದಲೇ ಜಾರಿಗೆ ಬಂದಿದೆ. ಈ...

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

by Shwetha
February 17, 2026
0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 17, 2026
0

ದಿನ ಭವಿಷ್ಯ: 17-02-2026 ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ದಿನವಾದ್ದರಿಂದ ನಿಮಗೆ ಉತ್ಸಾಹ ಹೆಚ್ಚಿರುತ್ತದೆ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram