ರಾಮನಗರ: ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
“ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ”.
“ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು.ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು.ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ.ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ” ಎಂದು ಟ್ವೀಟ್ ಮಾಡಿದ್ದಾರೆ.
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
1/2 pic.twitter.com/UnU0wvdEke— H D Kumaraswamy (@hd_kumaraswamy) April 21, 2020
ಇನ್ನು ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಅಪಘಾತ ನಡೆದಿದೆ. ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನ ಜಪ್ತಿ ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತರು 2 ವರ್ಷದ ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.