ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಹಾಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.
ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ಪತನ ಬಳಿಕ ಬಿಎಸ್‍ವೈ-ಕುಮಾರಸ್ವಾಮಿ ಮೂರು ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ರಾಮನಗರ ಸೇರಿದಂತೆ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ತಡೆ ಹಿಡಿದಿರುವ ಅನುದಾನ ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಭೇಟಿ ಮಾಡಿದ್ದಾಗಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದರು.
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಯಡಿಯೂರಪ್ಪ, ಕುಮಾರಸ್ವಾಮಿ ಮತ್ತೊಮ್ಮೆ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೆಚ್‍ಡಿಕೆ ಭೇಟಿ ವೇಳೆ ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಜತೆಗಿದ್ದರು. ಸುಮಾರು 15 ನಿಮಿಷಗಳ ಕಾಲ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಜೆಡಿಎಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನ ಬಿಡುಗಡೆ ವಿಚಾರವಾಗಿ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಜೆಡಿಎಸ್ ಹೇಳುತ್ತಿದ್ದರೂ, ಸಂಕಷ್ಟ ಎದುರಾದಾಗ ಪರೋಕ್ಷವಾಗಿ ಸರ್ಕಾರದ ಬೆಂಬಲಕ್ಕೆ ನಿಲ್ಲುವುದಾಗಿ ಸಿಎಂ ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಅಭಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇವಲ ಅನುದಾನ ವಿಚಾರವಾಗಿ ಸಿಎಂ ಅವರನ್ನು ಖುದ್ದು ಭೇಟಿ ಮಾಡಬೇಕಿತ್ತೇ, ದೂರವಾಣಿ ಮೂಲಕವೇ ಮತನಾಡಿ ಅನುದಾನ ವಿಚಾರ ಬಗೆಹರಿಸಿಕೊಳ್ಳಬಹುದಲ್ಲವೇ? ಆರ್.ಆರ್ ನಗರ, ಶಿರಾ ಉಪಚುನಾವಣೆ ಖುದ್ದು ಭೇಟಿ ಮಾಡಿರುವುದರ ಮರ್ಮವೇನು, ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದ್ದವು ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಈ ಆರೋಪಕ್ಕೆ ಈ ಭೇಟಿ ಪುಷ್ಠಿ ನೀಡುತ್ತಿದೆಯಾ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡಲು ಶುರುವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel