HDK : ಹೆಚ್ಡಿಕೆ ಸಿಎಂ ಆಗದಿದ್ರೆ ರಾಜಕೀಯ ನಿವೃತ್ತಿ – ಸಿಎಂ ಇಬ್ರಾಹಿಂ
ಎಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗುವುದು ಖಂಡಿತ. ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹೆಚ್ಡಿಕೆ ಸಿಎಂ ಆಗದೇ ಇದ್ದರೆ ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಭಾನುವಾರ ವಿಜಯಪುರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸಮೀಕ್ಷೆ ಪ್ರಕಾರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸೀಟು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ.
ಈಗಾಗಲೇ 70 ರಿಂದ 80 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಾಗಿದ್ದು, ಜೆಡಿಎಸ್ ಆರಂಭಿಸಿರುವ ‘ಪಂಚರತ್ನ’ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
HDK will retire from politics if he does not become CM – CM Ibrahim