ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಸಮರ ಮುಂದುವರೆಸಿದ್ದಾರೆ. ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು. ಇದು ನಿಮ್ಮ ಜೀವನಶೈಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ.. ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯ್ಯಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡೋರ ಮೇಲೆ ಸಿಡಿಸುವ ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.
https://twitter.com/hd_kumaraswamy/status/1516270097433706499?s=20&t=WlZ-hFIsW748zZV2Jub6oA
ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ.
ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ!! ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!!
https://twitter.com/hd_kumaraswamy/status/1516270099472080900?s=20&t=WlZ-hFIsW748zZV2Jub6oA
ಸ್ವಯಂ ಘೋಷಿತ ಸಂವಿಧಾನ ತಜ್ಞ,ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ? ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು ಎಂದು ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
hdk-Mr. Sulluramaiah h d kumaraswamy tweet reaction









