ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹಮದ್ (84) ಅವರು ಇಂದು ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಟ ಪುನೀತ್ ರಾಜ್ ಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು’ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಹಿರಿಯ ಸಾಹಿತಿಗಳ ನಿಧನಕ್ಕೆ ನಟ ಪುನೀತ್ ರಾಜ್ ಕುಮಾರ್ ಕಂಬನಿ ಮಿಡಿದಿದ್ದಾರೆ.
ಸಾಹಿತ್ಯಲೋಕಕ್ಕೆ ನಿಸಾರ್ ಅಹಮದ್ ಅವರ ಕೊಡುಗೆ ಅಜರಾಮರ ಎಂದಿರುವ ಅಪ್ಪು, ‘ನಿತ್ಯೋತ್ಸವ ಸಾಲುಗಳು ನೀಡಿದ ಕನ್ನಡದ ಮಹಾನ್ ಕವಿ ಪದ್ಮಶ್ರೀ ಕೆ. ಎಸ್. ನಿಸಾರ್ ಅಹಮದ್ ಸರ್ ಇನ್ನಿಲ್ಲ! ಸಾಹಿತ್ಯಲೋಕಕ್ಕೆ ಅವರ ಕೊಡುಗೆ ಅಜರಾಮರ!’ ಎಂದು ಟ್ವೀಟ್ ಮಾಡಿದ್ದಾರೆ.