ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಂಪರ್ಕದಲ್ಲಿ 7ಕ್ಕೂ ಅಧಿಕ ಜೆಡಿಎಸ್ ಶಾಸಕರು ಇದ್ದಾರೆ ಎನ್ನುವ ಮಾಹಿತಿ ಇದ್ದು, ಹೆಚ್ ಡಿಕೆ ಆಸ್ಪತ್ರೆಯಿಂದಲೇ ಅಲರ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಆಪರೇಷನ್ ಹಸ್ತ ನಡೆದರೆ ಪಕ್ಷದ ಅಸ್ತಿತ್ವ ಹಾಗೂ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ಗೆ ದೊಡ್ಡ ಪ್ರಮಾಣದಲ್ಲಿ ಹೊಡೆತ ಬೀಳಲಿದೆ. ಹೀಗಾಗಿ ಶಾಸಕರನ್ನು ಸಮಾಧಾನಪಡಿಸಲು ಕುಮಾರಸ್ವಾಮಿ ಮುಂದಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ವಿದೇಶ ಪ್ರವಾಸದ ಕುರಿತು ಶಾಸಕರು ಮತ್ತು ಪಕ್ಷದ ಮುಖಂಡರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ವೈದ್ಯರು ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ್ರೆ ಕುಮಾರಸ್ವಾಮಿ ಅವರು ತಮ್ಮ ಎಲ್ಲಾ ಶಾಸಕರು ಹಾಗೂ ಪಕ್ಷದ ಮುಖಂಡರ ಜೊತೆ ಪ್ರವಾಸಕ್ಕೆ ತೆರಳುವ ಸಾಧ್ಯತೆ ಕೂಡ ಇದೆ.