ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರ ತಿರಸ್ಕಾರ : ಕೇಂದ್ರದ ವಿರುದ್ಧ ಹೆಚ್ಡಿಕೆ ಕಿಡಿ

1 min read
Agahanashini River H D Kumaraswamy tweet saaksha tv

ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರ ತಿರಸ್ಕಾರ : ಕೇಂದ್ರದ ವಿರುದ್ಧ ಹೆಚ್ಡಿಕೆ ಕಿಡಿ HDK sparked against bjp

ಬೆಂಗಳೂರು : ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು,  “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು” ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು.

ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ.

ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd