HDK | ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದಿದೆ..?

1 min read
H D Kumarswamy Saaksha Tv

HDK | ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದಿದೆ..?

ಬೆಂಗಳೂರು :  ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದಿದೆ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಧಾರವಾಡ ನುಗ್ಗೀಕೇರಿ ಆಂಜನೇಯ ದೇವಸ್ಥಾನ ಆವರಣದಲ್ಲಿ ಮುಸ್ಲಿಂರಿಗೆ ಸೇರಿದ ನಾಲ್ಕು ಅಂಗಡಿಗಳನ್ನು ಶ್ರೀ ರಾಮಸೇನೆ ಕಾರ್ಯಕರ್ತರು ಧ್ವಂಸ ಮಾಡಿದ ಘಟನೆಯನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ.

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ.

hdk-tweet Which religion is better than human religion  saaksha tv

ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ ಎಂದು ಟ್ವೀಟ್ ಮಾಡಿದ್ದಾರೆ.

ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ.ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ

ದಯವಿಲ್ಲದ ಧರ್ಮವದೇವುದಯ್ಯ?  ದಯೆಯೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ, ದಯವೇ ಧರ್ಮದ ಮೂಲವಯ್ಯಾ,  ಕೂಡಲ ಸಂಗಯ್ಯನಂತೆಲ್ಲದೊಲ್ಲನಯ್ಯಾ -ಶ್ರೀ ಬಸವಣ್ಣ

ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದಿದೆ?  ಅಸಹನೆ, ಅಧರ್ಮ, ಅವಸಾನಕ್ಕೆ ಸೋಪಾನ. ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

hdk-tweet Which religion is better than human religion

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd