ಲಕ್ನೋ: ಬ್ಯಾಂಕ್ ಉದ್ಯೋಗಿಯೊಬ್ಬರು ಕೆಲಸ ಮಾಡುತ್ತಿದ್ದಾಗಲೇ ಕುರ್ಚಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಲಕ್ನೋದ ವಿಭೂತಿಖಂಡದ (VibhutiKhanda) ಹೆಚ್ ಡಿಎಫ್ ಸಿ ಬ್ಯಾಂಕ್ (HDFC Bank Branch) ಶಾಖೆಯಲ್ಲಿ ಈ ಘಟನೆ ನಡೆದಿದೆ.
45 ವರ್ಷದ ಸದಾಫ್ ಫಾತಿಮಾ ಸಾವನ್ನಪ್ಪಿರುವ ಉದ್ಯೋಗಿ. ಅವರು ಲಕ್ನೋದ ವಿಭೂತಿ ಖಂಡದ ಹೆಚ್ ಡಿಎಫ್ ಸಿ ಬ್ಯಾಂಕ್ ಶಾಖೆಯಲ್ಲಿ ಹೆಚ್ಚುವರಿ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕೆಲಸದಲ್ಲಿ ಒತ್ತಡದಿಂದ ಇರುತ್ತಿದ್ದರು ಎಂದು ತಿಳಿದು ಬಂದಿದೆ.








