ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಬಾಲಕಿಯು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಟಿವಿ ರಿಮೋಟ್ ಗಾಗಿ ಮಕ್ಕಳ ಮಧ್ಯೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಅಜ್ಜಿ ಬುದ್ಧಿವಾದ ಹೇಳಇದ್ದಾರೆ. ಇದರಿಂದಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








