ಬೆಂಗಳೂರು: ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಡ್ಡ ಮತ ಹಾಕಿದವರ ವಿರುದ್ಧ ಗುಡುಗಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ ಆರ್.ಅಶೋಕ್, ನಮ್ಮ ಮತದಾನ 47 ಬಿಜೆಪಿ ಅಭ್ಯರ್ಥಿಗೆ ವೋಟ್ ಹಾಕಲು ವಿಪ್ ಕೊಡಲಾಗಿತ್ತು. ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಗೂ ವಿಪ್ ಕಳುಹಿಸಲಾಗಿತ್ತು. ನಾವು ಪಕ್ಷಕ್ಕೆ ಮೋಸ ಮಾಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದರು. ತಾಯಿಗೆ ಮೋಸ ಮಾಡುವುದಿಲ್ಲ ಎಂದು ಹೇಳಿದ್ದರು ಎಂದು ನೆನಪು ಮಾಡಿಕೊಂಡಿಂದ್ದಾರೆ.
ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಎಂಬುವುದು ಗೊತ್ತಾಗಿದೆ. ಪದೇ ಪದೆ ಮೋಸ ಮಾಡುವುದನ್ನು ಜನ ಸಹಿಸುವುದಿಲ್ಲ. ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಇನ್ ಚಾರ್ಜ್ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮಶೇಖರ್ ನಡೆ ರಾಜಕೀಯ ಆತ್ಮಹತ್ಯೆ. ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇವೆ. ಸೋಮಶೇಖರ್, ಡಿಕೆಶಿ ಹಾಗೂ ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನು ಕ್ಷಮಿಸಲ್ಲ ಎಂದು ಕಿಡಿಕಾರಿದರು.