ಲಾರಿ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಈ ಘಟನೆ ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇ(Delhi Mumbai Express Way) ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಹಾಗೂ ಕಾರು ಬೇರೆ ಬೇರೆ ಲೇನ್ ನಲ್ಲಿ ಚಲಿಸುತ್ತಿದ್ದವು. ಆದರೆ, ಲಾರಿ ಚಾಲಕ ಏಕಾಏಕಿ ಯೂಟರ್ನ್ ತೆಗೆದುಕೊಳ್ಳಲು ಮುಂದಾಗಿದೆ. ಈ ವೇಳೆ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರು ಸಿಕರ್ ಜಿಲ್ಲೆಯಿಂದ ರಣಥಂಬೋರ್‌ನ ತ್ರಿನೇತ್ರ ಗಣೇಶ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.