ಮಂಗಳೂರು: ವ್ಯಕ್ತಿಯೊಬ್ಬ ಚಿಕಿತ್ಸೆಗೆಂದು ಆಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿಯೇ ನಿರಂತರ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆಯೊಂದು ನಡೆದಿದೆ.
ಈ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ. ಕೇರಳ (Kerala) ಮೂಲದ ಸಜಿತ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಯುವಕನು, ಪೈಲ್ಸ್ ಚಿಕಿತ್ಸೆಗೆಂದು ಯುವತಿಯನ್ನು ನಗರದಲ್ಲಿನ ಎ.ಜೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಚಿಕಿತ್ಸೆಯ ನಂತರ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ನಂತರ ನಗ್ನ ಫೋಟೋಗಳನ್ನ ತೆಗೆದುಕೊಂಡು ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೇ, ನಗ್ನ ಫೋಟೋ ತೋರಿಸಿ ಮಂಗಳೂರಿನಲ್ಲಿನ ಮಹಾರಾಜ ಹೋಟೆಲ್ ಗೆ ಕರೆಯಿಸಿಕೊಂಡು ಅಲ್ಲಿ ಕೂಡ ಅತ್ಯಾಚಾರ ನಡೆಸಿದ್ದಾನೆ. ನಂತರ ಯುವತಿಗೆ ಫುಡ್ ಫಾಯಿಸನ್ ಆಗಿ ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾದಾಗಲೂ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಆರೋಪಿಸಿ, ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.