Head Bush Trailer: ಡಾನ್ ಜಯರಾಜ್ ಪಾತ್ರದಲ್ಲಿ ಮಿಂಚಿದ ಧನಂಜಯ್…
ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತಿ ಚಿತ್ರ ಹೆಡ್ ಬುಷ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಭೂಗತ ಲೋಕದ ಕಥೆಯನ್ನ ಹೇಳಲಿರುವ ಈ ಸಿನಿಮಾದಲ್ಲಿ ಡಾನ್ M P ಜಯರಾಜ್ ಪಾತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ.
ಅಗ್ನಿ ಶ್ರೀಧರ್ ಕಥೆ ಚಿತ್ರಕಥೆ ಬರೆದಿದ್ದು, ಹೊಸ ನಿರ್ದೇಶಕ ಶೂನ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಡಾಲಿ ಪಿಕ್ಷರ್ಸ್ ಮತ್ತು ಸೋಮಣ್ಣ ಟಾಕಿಸ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.
ರಿಲೀಸ್ ಆಗಿರುವ ಟ್ರೈಲರ್ ನೋಡಿದ ಮೇಲೆ ಡಾನ್ ಜಯರಾಜ್ ಅವರ ಪಾತ್ರಕ್ಕೆ ಡಾಲಿ ಧನಂಜಯ್ ಹೇಳಿ ಮಾಡಿಸಿದಂತಿದ್ದು ಪಾತ್ರಕ್ಕೆ ಜೀವ ತುಂಬಿದ್ದಾರೆ. ತೆಲುಗಿನ RX 100 ಚಿತ್ರದ ಮೂಲಕ ಪರಿಚತವಾಗಿರುವ ನಟಿ ಪಾಯಲ್ ರಜಪೂತ್ ಹೆಡ್ ಬುಷ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಲೂಸ್ಮಾದ ಯೋಗಿ, ವಸಿಷ್ಠ ಸಿಂಹ, ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಸೇರಿದಂತೆ ಘಟಾನುಘಟಿಗಳ ತಾರಾಬಳಗವೇ ಚಿತ್ರದಲ್ಲಿದೆ.
1970 ರ ಸಮಯದಲ್ಲಿ ಬೆಂಗಳೂರು ಭೂಗತ ಜಗತ್ತನ್ನ ಈ ಚಿತ್ರದಲ್ಲಿ ಪರಿಚಯಿಸಲಾಗುತ್ತಿದೆ. ಅಗ್ನಿ ಶ್ರೀಧರ್ ಅವರ ‘ದಾದಾಗಿರಿಯ ದಿನಗಳು’ ಪುಸ್ತಕವನ್ನ ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈ ಕಾರಣದಿಂದ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ.
Head Bush Trailer: Dolly Dhananjay shines as Don Jayaraj…