ಕಾರವಾರ : ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ. ಭಟ್ಟಳ ಪಟ್ಟಣ, ಜಾಲಿ, ಶಿರಾಲಿ, ಹೆಬಳೆ, ಮಾವಿನಕುರ್ವಾ, ಮುಂಡಳ್ಳಿ, ಯಲ್ವಡಿಕವೂರು ಹಾಗೂ ಮುಟ್ಟಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಎಮರ್ಜೆನ್ಸಿ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ ದುಬೈ ಮೂಲದ ವ್ಯಕ್ತಿ ಹಾಗೂ ಮಾರ್ಚ್ 24 ರಂದು ದುಬೈನಿಂದ ಮುಂಬೈ ಮೂಲಕ ಭಟ್ಕಳಕ್ಕೆ ಬಂದಿದ್ದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿದ್ದಾರೆ.








