ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರವಾಗಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಮತ್ತು ಸರ್ಕಾರದ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆಗೆ ಸರ್ಕಾರವನ್ನು ಒತ್ತಾಯಿಸಿ ಸೆಪ್ಟಂಬರ್ 15 ರಿಂದ ಎಲ್ಲಾ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ. ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಸಂಘ ಈ ನಿರ್ಧಾರ ತೆಗೆದುಕೊಂಡಿದ್ದು, ಮಂಗಳವಾರದಿಂದ ವೈದ್ಯಕೀಯ ಸೇವೆ ಮಾಡದೆ, ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ 15 ಅಂದರೆ ಮಂಗಳವಾರದಿಂದ ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ಪಕ್ಕಾ ಆಗಿದ್ದು, ರಾಜ್ಯದಲ್ಲಿ ಸರ್ಕಾರಿ ವೈದ್ಯರು ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.
ವೈದ್ಯರ ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
ಮಂಗಳವಾರದಿಂದ ರಾಜ್ಯದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರೇ ಕೊರೊನಾ ಸೇರಿದಂತೆ ಯಾವುದೇ ಹೆಲ್ತ್ ಬುಲೆಟಿನ್ ಸಿಗೋದು ಡೌಟು. ಹಾಗೇ ಕೋವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸಾವು ನೋವು ಹೆಚ್ಚಾಗಬಹುದು. ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ. ಡಿಸಿ ಮತ್ತು ಸಿಇಓ ಮೀಟಿಂಗ್ ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಭಾಗವಹಿಸದಿದ್ದರೇ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಕಷ್ಟಸಾಧ್ಯವಾಗುತ್ತದೆ..
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. 
https://www.youtube.com/watch?v=EpKGAYcXrxE








