ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಆರೋಗ್ಯ

Health : ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ ನಲ್ಲಿ ಪಾರದರ್ಶಕತೆ ಇಲ್ಲ, ಈ ಬಗ್ಗೆ ಗಮನಹರಿಸಿ – ಸುಧಾಕರ್‌

ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ಇಲ್ಲ, ಈ ಬಗ್ಗೆ ಗಮನಹರಿಸಿ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಿವಿಮಾತು

Namratha Rao by Namratha Rao
December 18, 2022
in ಆರೋಗ್ಯ, Health, News, Newsbeat
sudhakar
Share on FacebookShare on TwitterShare on WhatsappShare on Telegram

Health : ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ ನಲ್ಲಿ ಪಾರದರ್ಶಕತೆ ಇಲ್ಲ, ಈ ಬಗ್ಗೆ ಗಮನಹರಿಸಿ – ಸುಧಾಕರ್‌

ಸರ್ಕಾರದ ವಿವಿಧ ಅನುಮತಿಗಳಿಗೆ ಏಕಗವಾಕ್ಷಿ ವ್ಯವಸ್ಥೆ ತರಲು ಪ್ರಯತ್ನ

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

June 19, 2026

ಬೆಂಗಳೂರು :  ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ ಮಾಡುವಾಗ ಹಾಗೂ ದತ್ತಾಂಶಗಳ ಸಂಗ್ರಹಣೆಯಲ್ಲಿ ಪಾರದರ್ಶಕತೆಯೇ ಇಲ್ಲ. ಫಾನಾ ಸಂಘಟನೆಯು ಈ ಬಗ್ಗೆ ಗಮನಹರಿಸಬೇಕು.

ಹಾಗೆಯೇ ಈ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಿವಿಮಾತು ಹೇಳಿದರು.

ಫಾನಾದಿಂದ ಆಯೋಜಿಸಿದ್ದ 3 ನೇ ರಾಷ್ಟ್ರೀಯ ಆರೋಗ್ಯ ಸಮ್ಮೇಳನದಲ್ಲಿ ಸಚಿವರು ಮಾತನಾಡಿದರು.

ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಫಾನಾ ಸಹಯೋಗದಲ್ಲಿ ಕೆಲಸ ಮಾಡಬೇಕು. ಜನರಿಗೆ ಸದಾ ಲಭ್ಯವಾಗುವಂತೆ ಹಾಗೂ ಚಿಕಿತ್ಸೆ ಕಡಿಮೆ ದರದಲ್ಲಿ ದೊರೆಯುವಂತೆ ವ್ಯವಸ್ಥೆ ಇರಬೇಕು.

ನಾನು ಯಾರನ್ನೂ ನಿರ್ದಿಷ್ಟವಾಗಿ ದೂರುತ್ತಿಲ್ಲ. ಆದರೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆಯೇ ಇಲ್ಲ. ಸರ್ಕಾರದ ರಾಷ್ಟ್ರೀಯ, ರಾಜ್ಯ ಮಟ್ಟದ ಕಾರ್ಯಕ್ರಮಗಳಿಗೆ ಸರಿಯಾದ ದತ್ತಾಂಶ ಬೇಕಾಗುತ್ತದೆ. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳು ಮಾಹಿತಿ, ದತ್ತಾಂಶಗಳನ್ನು ಸರಿಯಾಗಿ ಸರ್ಕಾರದೊಂದಿಗೆ ಹಂಚಿಕೊಳ್ಳಬೇಕು ಎಂದರು.

ಉತ್ತಮ ಸಂಬಂಧ ಅಗತ್ಯ

ಖಾಸಗಿ ಆಸ್ಪತ್ರೆಗಳಿಲ್ಲದೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಉತ್ತಮ ಸಂಬಂಧ ಇರಬೇಕು. ಉತ್ತಮ ಸಮನ್ವಯದಿಂದ ಹಾಗೂ ನಿರಂತರ ಸಂವಹನದಿಂದ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.

ಮೊದಲು ವೈದ್ಯ ಕೇಂದ್ರಿತ ವ್ಯವಸ್ಥೆ ಇತ್ತು. ಈಗ ರೋಗಿಗಳ ಕೇಂದ್ರಿತ ವ್ಯವಸ್ಥೆ ಇದೆ. ಜೀವನಶೈಲಿಯ ಬದಲಾವಣೆಯಿಂದಾಗಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದೆ. ಜನವರಿ ಅಂತ್ಯಕ್ಕೆ ಎಲ್ಲಾ ಕ್ಲಿನಿಕ್‌ಗಳು ಕಾರ್ಯಾರಂಭವಾಗಲಿವೆ. ಕಾರ್ಮಿಕರು, ವಲಸಿಗರು, ಕೊಳೆಗೇರಿ ನಿವಾಸಿಗಳಿಗೆ ಇಂತಹ ಕ್ಲಿನಿಕ್‌ಗಳು ಮೀಸಲಾಗಿವೆ. ಇದೇ ರೀತಿ ಬಡವರು ಹೆಚ್ಚಿರುವ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ ʼಆಯುಷ್ಮತಿʼ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಮಾನಸಿಕ ಆರೋಗ್ಯ ಇನೀಶಿಯೇಟಿವ್‌ ಆರಂಭಿಸಿದ್ದು, ಇದನ್ನೇ ಮಾದರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಕಾರ್ಯಕ್ರಮ ಜಾರಿ ಮಾಡಿದೆ. ಭಾರತದಲ್ಲಿ ನಾಲ್ಕು ವ್ಯಕ್ತಿಯಲ್ಲಿ ಒಬ್ಬರು ಮಧುಮೇಹಕ್ಕೊಳಗಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇದೂ ಸೇರಿದಂತೆ ಎಲ್ಲಾ ಅಸಾಂಕ್ರಾಮಿಕ ರೋಗಿಗಳನ್ನು ಗ್ರಾಮೀಣ ಹಂತದಲ್ಲೇ ತಪಾಸಣೆ ಮಾಡಬೇಕು ಎಂದು ನಿರ್ಧರಿಸಲಾಗಿದೆ. ಈವರೆಗೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.60 ಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ಸಂಪದ್ಭರಿತ ರಾಜ್ಯವನ್ನು ನಿರ್ಮಾಣ ಮಾಡಲು ಆರೋಗ್ಯಯುತ ರಾಜ್ಯವನ್ನು ನಿರ್ಮಿಸಬೇಕಿದೆ ಎಂದರು.

ಆರೋಗ್ಯ ಕ್ಷೇತ್ರ ವೇಗವಾಗಿ ಬೆಳೆಯುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದ ಆರೋಗ್ಯ ಕ್ಷೇತ್ರವು 370 ಬಿಲಿಯನ್‌ ಯುಎಸ್‌ ಡಾಲರ್‌ಗೆ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ. ಸಣ್ಣ ಆಸ್ಪತ್ರೆಗಳು ಕೂಡ ಬೆಳೆಯಬೇಕು ಎಂದರು.

ಕೋವಿಡ್‌ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಬಹಳ ನೆರವು ನೀಡಿವೆ ಎಂದು ಶ್ಲಾಘಿಸಿದ ಸಚಿವರು, ಇದಕ್ಕಾಗಿ ಧನ್ಯವಾದ ತಿಳಿಸಿದರು.

ಏಕಗವಾಕ್ಷಿ ವ್ಯವಸ್ಥೆಗೆ ಕ್ರಮ

ಖಾಸಗಿ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಬೇಕಿರುವ ವಿವಿಧ ಅನುಮತಿಗಳಿಗೆ ಏಕಗವಾಕ್ಷಿ ವ್ಯವಸ್ಥೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ಭರವಸೆ ನೀಡಿದರು.

Tags: #saakshatvDRK. SudhakarHealthhospitals
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram