ನಮಗೆ ಜನರ ಮನರಂಜನೆಗಿಂತ ಆರೋಗ್ಯ ಮುಖ್ಯ : ಸಚಿವ.ಕೆ.ಸುಧಾಕರ್
ಬೆಂಗಳೂರು : ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ 100ರಷ್ಟು ಭರ್ತಿಗೆ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರ ಶೇ 50 ರಷ್ಟು ಮಾತ್ರ ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಿದೆ.
ಈ ಬಗ್ಗೆ ಸಿನಿ ದಿಗ್ಗಜರು, ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಮನರಂಜನೆಗಿಂತ ಜನರ ಆರೋಗ್ಯ ಬಹಳ ಮುಖ್ಯವಾಗುತ್ತೆ ಎಂದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 100ರಷ್ಟು ಭರ್ತಿಗೆ ಅವಕಾಶ ಕೊಟ್ಟಿದ್ದರೂ, ರಾಜ್ಯಗಳಿಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಪರಮಾಧಿಕಾರ ನೀಡಿದೆ.
ಹಾಗಾಗಿ ತಜ್ಞರ ಸಲಹೆ ಆಧರಿಸಿದ ನಾವು ಮಾರ್ಗಸೂಚಿ ಪ್ರಕಟಿಸಿದ್ದೇವೆ. ಅದ್ರಂತೆ, ಫೆಬ್ರವರಿ 28ರವೆಗೆ 50ರಷ್ಟು ಭರ್ತಿಗೆ ಅವಕಾಶ ನೀಡಿದ್ದೇವೆ ಎಂದು ಹೇಳಿದರು.
ಚಿತ್ರಮಂದಿರ ಹೇಳಿಕೇಳಿ ಹವಾನಿಯಂತ್ರಿತ ಜಾಗ. ಇಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತೆ. ಕೇರಳದಲ್ಲಿ ಅನುಮತಿ ನೀಡಿದ ಮೇಲೆ ದಿನನಿತ್ಯ 5 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗ್ತಿವೆ.
ಇನ್ನು ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯ ಮೇರೆಗೆ ಮಾರ್ಗಸೂಚಿ ಹೊರಡಿಸಿದ್ದೇವೆ. ಆದ್ರೂ ನೋಡೋಣಾ ಈ ಕುರಿತು ಸಿಎಂ ಜೊತೆ ಸಭೆ ನಡೆಸುತ್ತೇವೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagramb
Subscribe to our Telegram Channel









