ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಆರೋಗ್ಯ

Health : ಬ್ರೈನ್‌ ಹೆಲ್ತ್‌ ಇನೀಶಿಯೇಟಿವ್‌ ತಂದ ಮೊದಲ ರಾಜ್ಯ ಕರ್ನಾಟಕ

Namratha Rao by Namratha Rao
December 17, 2022
in ಆರೋಗ್ಯ, Health, News, Newsbeat
dr sudhakar saakshatv bengaluru
Share on FacebookShare on TwitterShare on WhatsappShare on Telegram

Health : ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಮಾನಸಿಕ ಆರೋಗ್ಯ ಸೇವೆ : ಸುಧಾಕರ್‌

Health : ಬ್ರೈನ್‌ ಹೆಲ್ತ್‌ ಇನೀಶಿಯೇಟಿವ್‌ ತಂದ ಮೊದಲ ರಾಜ್ಯ ಕರ್ನಾಟಕ

Related posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

June 28, 2026
ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

June 28, 2026

ಬೆಂಗಳೂರು , ಡಿಸೆಂಬರ್‌ 17, ಶನಿವಾರ

ಗ್ರಾಮೀಣ ಪ್ರದೇಶಗಳ ಜನರ ನರ ಸಂಬಂಧಿ, ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಕೌನ್ಸಿಲಿಂಗ್‌, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾನಸಿಕ ಅನಾರೋಗ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ʼCOMHAD-2022ʼ 3 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ವಹಿಸುತ್ತಿದೆ. ನಿಮ್ಹಾನ್ಸ್‌ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಂಬಿಬಿಎಸ್‌ ವೈದ್ಯರಿಗೆ ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತಿದೆ. ಇವರು ಗ್ರಾಮೀಣ ಜನರ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕೌನ್ಸಿಲಿಂಗ್‌ ಮೊದಲಾದ ಕ್ರಮಗಳ ಮೂಲಕ ಪರಿಹಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಮಾನಸಿಕ ಆರೋಗ್ಯ ಸಮಸ್ಯೆಯು ಇಂದಿನ ಸಮಾಜದ ಪ್ರಮುಖ ಆರೋಗ್ಯ ಸಮಸ್ಯೆಯೂ ಆಗಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ, ʼಬ್ರೈನ್‌ ಹೆಲ್ತ್‌ ಇನೀಶಿಯೇಟಿವ್‌ʼ ಎಂಬ ಕಾರ್ಯಕ್ರಮವನ್ನು ಕರ್ನಾಟಕ ಮೊದಲ ಬಾರಿಗೆ ಜಾರಿ ಮಾಡಿದೆ. ಇದರ ಪ್ರೇರಣೆಯಿಂದಾಗಿಯೇ ಕೇಂದ್ರ ಸರ್ಕಾರದ ಮಟ್ಟದಲ್ಲಿ ಇದೇ ಮಾದರಿಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾನಸಿಕ ಒತ್ತಡ, ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿಯ ಬದಲಾವಣೆ, ನಿದ್ದೆಯಲ್ಲಿ ವ್ಯತ್ಯಾಸ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅದರಲ್ಲೂ, ಯುವಜನರಲ್ಲಿ ಹಾಗೂ ವೃದ್ಧರಲ್ಲಿ ಒಂದಲ್ಲ ಒಂದು ಬಗೆಯ ಮಾನಸಿಕ ಅನಾರೋಗ್ಯ ಕಂಡುಬರುತ್ತಿದೆ. ಆದ್ದರಿಂದ ಈ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು.

ನರ ಸಂಬಂಧಿ ರೋಗಗಳಿಂದಾಗಿ ಆರೋಗ್ಯ ಕ್ಷೇತ್ರದ ಮೇಲೆ ಹೊರೆ ಹೆಚ್ಚುತ್ತಿದೆ. ಇದು ಆರೋಗ್ಯ ವಲಯಕ್ಕೆ ದೊಡ್ಡ ಸವಾಲಾಗಿದೆ. ಇದು ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ. ಕರ್ನಾಟಕದಲ್ಲಿ ನರ ಸಂಬಂಧಿ ಸಮಸ್ಯೆ, ಮೂರ್ಛೆ ಹಾಗೂ ಪಾರ್ಶ್ವವಾಯು ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದೆ. ಬಾಲ್ಯದಲ್ಲೇ ಮಕ್ಕಳು ಅಂಗವಿಕಲರಾಗಲು ಇರುವ ಕಾರಣಗಳಲ್ಲಿ ನರ ಸಂಬಂಧಿ ಸಮಸ್ಯೆಗಳೇ ಶೇ.70 ಪಾಲು ಹೊಂದಿವೆ. ಈ ಬಗ್ಗೆ ಶಾಲಾ ಮಕ್ಕಳಲ್ಲಿ, ವಯಸ್ಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇಂತಹ ಸಮ್ಮೇಳನದ ಮೂಲಕ ಸಮಸ್ಯೆಗಳಿಗೆ ಹೊಸ ಉತ್ತರ ದೊರೆಯಲಿದೆ. ಇದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಸಭೆಯ ಅಂಶಗಳನ್ನು ತಿಳಿಸಿ

ಸಮ್ಮೇಳನದಲ್ಲಿ ಚರ್ಚೆಯಾದ ವಿಚಾರಗಳನ್ನು ಆರೋಗ್ಯ ಇಲಾಖೆಗೆ ನೀಡಿದರೆ, ಈ ಬಗ್ಗೆ ಚರ್ಚಿಸಲಾಗುವುದು. ಇದು ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Tags: #saakshatvbrain health initiativeHealthkarnataka
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

by Shwetha
June 28, 2026
0

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೋಬ್ಬರಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಘೋಷಿಸುವ ಮೂಲಕ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

by Shwetha
June 28, 2026
0

ಚಿಕ್ಕಬಳ್ಳಾಪುರ:ನಗರದ ಕನ್ನಡ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿತು. ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಹಾಗೂ ಅವರ ವಿರುದ್ಧ ಒಕ್ಕಲಿಗ...

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram