Dr K Sudhakar | ಧರ್ಮಕ್ಕೆ ಸಂಬಂಧಿಸಿದ ವಿವಾದಗಳಲ್ಲಿ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ
1 min read
Dr K Sudhakar | ಧರ್ಮಕ್ಕೆ ಸಂಬಂಧಿಸಿದ ವಿವಾದಗಳಲ್ಲಿ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ
ಬೆಂಗಳೂರು : ಧಾರ್ಮಿಕ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ. ಅಂತಹ ಯಾವುದೇ ಆಲೋಚನೆಯನ್ನು ಸರ್ಕಾರ ಮಾಡಿಲ್ಲ.
ಇದು ಯಾವುದೇ ಒಂದು ಧರ್ಮದ ಸರ್ಕಾರ ಅಲ್ಲ, ಇದು ಎಲ್ಲರ ಸರ್ಕಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಪ್ರತಿ ಧರ್ಮವನ್ನು ಸಮಾನವಾಗಿ ಕಾಣುತ್ತದೆ. ಇಲ್ಲಿ ಯಾರೂ ಮೇಲು, ಕೀಳು ಅಲ್ಲ.
ಪ್ರತಿಯೊಬ್ಬರಿಗೂ ಅವರ ಧರ್ಮದ ಅನುಸಾರ ಆಚರಣೆಗಳನ್ನು ಮಾಡಲು ಕಾನೂನಿನಲ್ಲಿ ಸಮಾನ ಅವಕಾಶವಿದೆ. ಹಾಗೆಯೇ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡಿಲ್ಲ ಎಂದು ಹೇಳಿದರು.
ಹಿಜಾಬ್, ಹಲಾಲ್ ಮೊದಲಾದ ಧಾರ್ಮಿಕ ವಿವಾದಗಳಲ್ಲಿ ಸರ್ಕಾರ ಯಾವುದೇ ಪಾತ್ರ ನಿರ್ವಹಿಸಿಲ್ಲ. ಆದರೆ ಕೆಲವರು ಇದು ಸರ್ಕಾರದ ಪ್ರಾಯೋಜಿತ ಎಂದು ಹೇಳುತ್ತಿದ್ದಾರೆ.
ಈ ಸರ್ಕಾರ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ನಾವೆಲ್ಲರೂ ಎಲ್ಲ ಧರ್ಮಗಳನ್ನೂ ಗೌರವದಿಂದ ಕಾಣುತ್ತೇವೆ. ಪ್ರತಿ ಧರ್ಮಕ್ಕೂ ಸಹ ನಾವು ಗೌರವ ಕೊಡುತ್ತಿದ್ದೇವೆ.
ನಮ್ಮ ಜಾತ್ಯತೀತ ನಿಲುವಿನಲ್ಲಿ ಬದಲಾವಣೆಯೇನೂ ಆಗಿಲ್ಲ. ಹಲಾಲ್ ನಿಷೇಧದ ಹಿಂದೆ ಯಾರಿದ್ದಾರೆಂದು ನನಗೂ ತಿಳಿದಿಲ್ಲ.
ಆದರೆ ಇದರಲ್ಲಿ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕಾದ ಅಗತ್ಯವಿದೆ ಎಂದರು.
Health minister dr k sudhakar reaction on halal issue