ಕರ್ಫ್ಯೂಗೆ ಸ್ವಪಕ್ಷದಲ್ಲಿಯೇ ಅಪಸ್ವರ : ಸುಧಾಕರ್ ಹೇಳಿದ್ದೇನು..?
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.
ಆದ್ರೆ ಈ ಕರ್ಫ್ಯೂಗೆ ಆಡಳಿತ ಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಈಗಾಗಲೇ ಸಿಎಂ ಹೇಳಿಕೆ ನೀಡಿದ್ದಾರೆ.
ಕೆಲವರು ವೈಯುಕ್ತಿಕ ನೆಲೆಗಟ್ಟಿನ ಮೇಲೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಲ್ಲಿ ವೈಜ್ಞಾನಿಕ ಕಾರಣಗಳಿರುವುದಿಲ್ಲ ಎಂದಿದ್ದಾರೆ.
ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ಮಾತನಾಡಿದ ಡಾ.ಕೆ.ಸುಧಾಕರ್, ಕೋವಿಡ್ ಬಗ್ಗೆ ರಾಜಕಾರಣಿಗಳು ಹೇಳಿಕೆ ಕೊಡುವುದಕ್ಕೂ ವೈದ್ಯರು, ತಜ್ಞರು ಕೊಡುವುದಕ್ಕೂ ವ್ಯತ್ಯಾಸ ಇರುತ್ತದೆ.
ಸರ್ಕಾರ ಎಲ್ಲಾ ಆಯಾಮ, ದೃಷ್ಟಿಕೋನವನ್ನು ಗಮನದಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಇದೇ ವೇಳೆ ಕರ್ಫ್ಯೂಗೆ ಹೋಟೆಲ್ ಮಾಲೀಕರ ವಿರೋಧದ ಬಗ್ಗೆ ಮಾತನಾಡಿದ ಅವರು, ಕೆಲವರು ಆರ್ಥಿಕ ನಷ್ಟ, ಆರ್ಥಿಕ ವಹಿವಾಟು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡುತ್ತಿದ್ದಾರೆ.
ಆದ್ರೆ ಸರ್ಕಾರ ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ, ಜೀವ, ಜೀವನ ಎರಡು ಮುಖ್ಯ ಎಂದು ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.









