ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮುಲು ಅವರ ಸರ್ಕಾರಿ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಪತಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಮಹಿಳಾ ಸಿಬ್ಬಂದಿ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿದೆ. ಅಲ್ಲದೆ ವರದಿ ಬರಬೇಕಿದೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ನಿವಾಸಕ್ಕೆ ಆರೋಗ್ಯ ಸಚಿವ ಶ್ರೀರಾಮಲು ಹೋಗಿ ಬಂದಿದ್ದರು. ಈ ಹಿನ್ನೆಯಲ್ಲಿ ಸಚಿವ ಶ್ರೀರಾಮುಲು ಅವರ ಸರ್ಕಾರಿ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ ಸರ್ಕಾರಿ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳನ್ನು ತೆರವು ಮಾಡಲಾಗಿದೆ. ನಿವಾಸಕ್ಕೆ ಸ್ಯಾನಿಟೈಜ್ ಮಾಡಲಾಗುತ್ತಿದೆ.