ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

Shwetha by Shwetha
August 18, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ಶಾಸಕರು ಯಾರೋ ಏನೋ ಹೇಳಿದರು ಎಂದ ತಕ್ಷಣ ಸರ್ಕಾರ ತನ್ನ ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಎಂದು ಗರಂ ಆಗಿರುವ ಸಚಿವರು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಗುಟ್ಕಾ ಬ್ಯಾನ್ ಆದೇಶವನ್ನು ಹಿಂಪಡೆಯುತ್ತದೆ ಎಂದು ಯಾರು ಹೇಳಿದ್ದು? ಶಾಸಕರು ಬಂದು ಏನೋ ಮಾತನಾಡುತ್ತಾರೆ ಎಂದ ತಕ್ಷಣ ಅದನ್ನು ಕೇಳಲು ಸಾಧ್ಯವೇ ಎಂದು ನೇರವಾಗಿ ಪ್ರಶ್ನಿಸಿದರು. 2024 ರಲ್ಲಿಯೂ ನಾನೇ ಮೊದಲ ಬಾರಿಗೆ ಇದನ್ನು ಬ್ಯಾನ್ ಮಾಡಿದ್ದೆ. ಗುಟ್ಕಾ ಇರಲಿ, ಆದರೆ ಅದರಲ್ಲಿ ಯಾವುದೇ ಕಾರಣಕ್ಕೂ ಅಪಾಯಕಾರಿ ನಿಕೋಟಿನ್ ಮಿಶ್ರಣವಾಗಿ ಮಾರುಕಟ್ಟೆಗೆ ಬರಬಾರದು. ಈ ಕುರಿತು ನಾನು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಜೊತೆಯೂ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದರು.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಗುಟ್ಕಾ ಸೇವನೆಯಿಂದಾಗುವ ತೀವ್ರ ದುಷ್ಪರಿಣಾಮಗಳನ್ನು ಬಿಚ್ಚಿಟ್ಟ ಸಚಿವರು, ನಿಷೇಧವನ್ನು ವಿರೋಧಿಸುವವರು ಅಥವಾ ಹಗುರವಾಗಿ ಮಾತನಾಡುವವರು ಒಮ್ಮೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ ನೋಡಲಿ. ಅಲ್ಲಿ ಸಾಯುತ್ತಿರುವ ರೋಗಿಗಳ ಸ್ಥಿತಿ ನೋಡಿದರೆ ನಿಮ್ಮ ಕಣ್ಣಲ್ಲಿ ನೀರಲ್ಲ, ರಕ್ತವೇ ಬರುತ್ತದೆ. ಪಾನ್ ಮಸಾಲಾದಲ್ಲಿ ನಿಕೋಟಿನ್ ಮಿಕ್ಸ್ ಮಾಡಿ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಅಕ್ರಮ ಉತ್ಪನ್ನಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇದೇ ವೇಳೆ ಅಡಿಕೆ ಬೆಳೆಗಾರರಲ್ಲಿ ಮೂಡಿರುವ ಆತಂಕಕ್ಕೆ ಸ್ಪಷ್ಟನೆ ನೀಡಿದ ಸಚಿವರು, ಈ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಬದಲಿಗೆ ಮುಂಬರುವ ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಇದರಿಂದ ಇನ್ನೂ ಹೆಚ್ಚಿನ ಉಪಯೋಗವಾಗಲಿದೆ. ಸಾರ್ವಜನಿಕರು ಹಾಗೂ ಬೆಳೆಗಾರರು ಕನಿಷ್ಠ ಮೂರರಿಂದ ನಾಲ್ಕು ತಿಂಗಳು ಕಾದು ನೋಡಬೇಕು. ಶುದ್ಧ ಅಡಿಕೆ ಮಾರಾಟಕ್ಕೆ ಯಾವುದೇ ತಡೆ ಇಲ್ಲ, ಕೇವಲ ನಿಕೋಟಿನ್ ಬೆರೆಸಿದ ವಿಷಕಾರಿ ಉತ್ಪನ್ನಗಳನ್ನು ಮಾತ್ರ ಬ್ಯಾನ್ ಮಾಡಲಾಗಿದೆ ಎಂದು ವಿವರಿಸಿದರು.

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಗುಟ್ಕಾ ಬ್ಯಾನ್ ಆದೇಶ ಭಾರೀ ಸದ್ದು ಮಾಡುತ್ತಿದ್ದು, ರಾಜಕೀಯ ವಲಯದಲ್ಲೂ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ ಸರ್ಕಾರದ ಹಂತದಲ್ಲಿ ಈ ಆದೇಶದ ಬಗ್ಗೆ ಮರುಪರಿಶೀಲನೆ ನಡೆಯಲಿದೆ ಎಂಬ ವದಂತಿಗಳಿಗೆ ಸಚಿವ ಯುಟಿ ಖಾದರ್ ನೀಡಿರುವ ಈ ಖಡಕ್ ಉತ್ತರ ಸಂಪೂರ್ಣ ತೆರೆ ಎಳೆದಿದೆ.

ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram