ಇತ್ತೀಚೆಗೆ ಕಾಸ್ಮೆಟಿಕ್ ಸರ್ಜರಿ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗೆ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಮಾಡೆಲ್ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಬ್ರೆಜಿಲ್ನ ಮಾಡೆಲ್ ಲುವಾನಾ ಆಂಡ್ರೇಡ್ ಹೀಗೆ ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದ್ದು, ಇವರು ಕೇವಲ 29ನೇ ವರ್ಷದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಾಸ್ಮೆಟಿಕ್ ಸರ್ಜರಿ ಸಂದರ್ಭದಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ ನಾಲ್ಕು ಬಾರಿ ಹೃದಯಾಘಾತವಾಗಿತ್ತು ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾದಾಗ ಅವರಲ್ಲಿ ಉಸಿರಾಟದ ತೊಂದರೆ ಉಂಟಾಗಿದೆ. ಆನಂತರ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ವೈದ್ಯರು ತಕ್ಷಣ ಐಸಿಯು ವಾರ್ಡ್ಗೆ ಸ್ಥಳಾಂತರಿಸಿದ್ದಾರೆ. ಆದರೆ, ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.