heart attack: ಇಸ್ಪೀಟ್ ಆಡುತ್ತಿದ್ದಾಗಲೇ ಹೃದಯಾಘಾತ ವ್ಯಕ್ತಿ ಸಾವು…
ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರಿನ ಜೆಡಿಎಸ್ ಮುಖಂಡ ಆಶ್ವಥ್ ಚಿಯಾ ಮೃತ ವ್ಯಕ್ತಿ. ಕ್ಲಬ್ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಅಶ್ವಥ್ಗೆ ಹೃದಯಾಘಾತವಾಗಿ ಪಕ್ಕದ ಸ್ನೇಹಿತ ಮೇಲೆ ಕುಸಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಘಟನೆಯ ದೃಶ್ಯಾವಳಿಗಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮೈಸೂರು, ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದು, ಕೆಲ ದಿನಗಳಿಂದ ರಾಜಕೀದಿಂದ ದೂರವಾಗಿದ್ದರು ಎನ್ನಲಾಗಿದೆ.
Heart attack: Man dies of heart attack while playing Ispeet…