ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ Saaksha Tv
ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಳಿಗ್ಗೆ 9:50ಕ್ಕೆ ಬೆಂಕಿಯನ್ನು ನಂದಿಸಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೂರ್ವ ಕೇಂದ್ರ ರೈಲ್ವೆ ಸಿಪಿಆರ್‌ಒ ಮಾಹಿತಿ ನೀಡಿದ್ದಾರೆ.







