ಕೊರೊನಾ ಲಾಕ್ ಡೌನ್ ನಡುವೆ ಬೆಂಗಳೂರಿನ ಬಂಬೂಬಜಾರ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗಿನ ಜಾವ 2 ಗಂಟೆಗೆ ಇಲ್ಲಿನ ಸುಮಾರು 12 ಮರದ ಗೋಡೌನ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ 18 ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸತತ 5 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







