ಭಾರೀ ಭೂ ಕುಸಿತ ಉಂಟಾಗಿದ್ದು, ಕನಿಷ್ಠ 44 ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಚೀನಾದ ನೈಋತ್ಯ ಪ್ರಾಂತ್ಯದ ಗೈಝೌನಲ್ಲಿನ ಜೆಂಕ್ಯಾಂಗ್ ಕೌಂಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೂಕುಸಿತದಿಂದ 18 ಮನೆಗಳು ಸಂಪೂರ್ಣ ನಾಶವಾಗಿವೆ ಎಂದು ಹೇಳಲಾಗುತ್ತಿದೆ.
ಅಲ್ಲದೇ, ಅವಶೇಷಗಳಡಿ ಸಿಲುಕಿದವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ತೆಗೆದುಹಾಕಲು ಹಗಲಿರುಳು ಶ್ರಮಿಸುತ್ತಿವೆ. ಕೆಲವರನ್ನು ಜೀವಂತವಾಗಿ ರಕ್ಷಿಸಬಹುದು ಎಂದು ಅಂದಾಜಿಸಲಾಗಿದೆ.
200ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ.