ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh)ಲ್ಲಿ ವರುಣನ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ಸಾಕಷ್ಟು ಅನಾಹುತಗಳು ನಡೆಯುತ್ತಿವೆ.
ಹಿಮಾಚಲ ಪ್ರದೇಶದ ಕುಲು (Kullu) ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಿಂದಾಗಿ ಭಾರೀ ಕಟ್ಟಡಗಳು ನೆಲಸಮವಾಗಿವೆ. ಭೂಕುಸಿತದ ದೃಶ್ಯಗಳು ಕ್ಯಾಮೆರಾಗಳಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಮನೆಗಳು ನಾಶವಾಗಿವೆ.
ಭೂಕುಸಿತದಿಂದಾಗಿ ಸ್ಥಳದಲ್ಲಿ ಸಿಲುಕಿರುವವರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಕಾರ್ಯಾಚರಣೆ ನಡೆಸುತ್ತಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. 2 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಅನ್ನಿ, ಕುಲು ಪ್ರದೇಶದ ಬೃಹತ್ ವಾಣಿಜ್ಯ ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಸದ್ಯ ಇಲ್ಲಿಯವರೆಗೆ 2,022 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಮತ್ತು 9,615 ಮನೆಗಳು ಭಾಗಶಃ ಹಾನಿಗೊಳಗಾಗಿವೆ.