ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ.
ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ರಾತ್ರಿ ಅಲ್ಪ ಪ್ರಮಾಣದಲ್ಲಿ ಬಿಡುವು ನೀಡಿದ್ದ ಮಳೆ, ಇಂದು ಮಧ್ಯಾಹ್ನದ ನಂತರ ಕೆಲಕಾಲ ಸುರಿದಿದೆ. ಸಂಜೆಯಾಗುತ್ತಿದ್ದಂತೆ ನಗರದ ಕೆಲವೆಡೆ ಜಿಟಿಜಿಟಿ ಮಳೆಯಾದರೆ, ಇನ್ನೂ ಕೆಲ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ನಡುವೆ, ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜಕಾಲುವೆಗಳು ಉಕ್ಕಿ ಹರಿಯುತ್ತಿವೆ. ರಾಜಕಾಲುವೆಗೆ ಹೊಂದಿಕೊಂಡಂತೆ ನಿರ್ಮಾಣವಾದ ಮೂರು ಅಪಾರ್ಟ್‍ಮೆಂಟ್‍ಗಳ ತಳಪಾಯ ಕುಸಿದಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಅಪಾಯ ಎದುರಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ 800 ಸ್ಕ್ವೇರ್ ಮೀಟರ್ ವಿಸ್ತಾರವಿದೆ. ಬೆಂಗಳೂರು ಹೊರವಲಯದಲ್ಲಿ ಇರುವ ಎಲ್ಲಾ ಜಾಗಗಳೂ ರೆವಿನ್ಯೂ ಲೇಔಟ್‍ಗಳಾಗಿವೆ. ಹೊರವಲಯದಲ್ಲಿ ಪ್ಲಾನ್ ಪ್ರಕಾರ ಮನೆ ನಿರ್ಮಾಣವಾಗಿಲ್ಲ. ಬಫರ್ ಝೋನ್ ವ್ಯಾಪ್ತಿಯಲ್ಲೂ ಮನೆ ನಿರ್ಮಾಣವಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇವೆಲ್ಲವೂ ಹೊಸ ಪ್ರದೇಶವಾಗಿದ್ದು, ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಹಿಂದೆ ಎಲ್ಲೆಲ್ಲಿ ಪ್ರವಾಹ ಸ್ಥಿತಿ ಎದುರಾಗಿತ್ತೋ ಅಲ್ಲಿ ಕಾಮಗಾರಿ ಮಾಡಿರೋದ್ರಿಂದ ಈಗ ಪ್ರವಾಹ ಆಗಿಲ್ಲ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel