ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದಿನಿಂದ ಸೆಪ್ಟೆಂಬರ್ 10ರವರೆಗೆ ಭಾರೀ ಮಳೆಯ ಸಾಧ್ಯತೆ ಇದೆ.
ಮಳೆಯಾಗಲಿರುವ ಪ್ರದೇಶಗಳು:
ಕರಾವಳಿ ಜಿಲ್ಲೆಗಳು
ದಕ್ಷಿಣ ಒಳನಾಡಿನ ಹಲವು ಭಾಗಗಳು
ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯಾಗಲಿರುವ ಜಿಲ್ಲೆಗಳು:
ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೀದರ್ ಹಾಗೂ ಬೆಳಗಾವಿ.
ರೈತರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.








