Heavy Rain | ಮಹಾ ಮಳೆಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ : ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿದೆ.
ಇದರಿಂದ ಜಿಲ್ಲೆಯಲ್ಲಿನ ಸಪ್ತನದಿಗಳು ಮೈದುಂಬಿ ಹರಿಯುತ್ತಿವೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಭಾರಿ ಪ್ರಮಾಣದ ಹಾನಿಯುಂಟಾಗಿದೆ.
ಈ ನಡುವೆ ಮಹಾ ಮಳೆಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ.

ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.
15 ವರ್ಷದ ಅನಂತು ಧರ್ಮೇಂದ್ರ ಪಾಶೆಟ್ಟಿ ಮೃತ ದುರ್ದೈವಿಯಾಗಿದ್ದಾನೆ.
ರಾತ್ರಿ 10 ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಏಕಾಏಕಿ ಯುವಕನ ಮೇಲೆ ಕುಸಿದು ಬಿದ್ದಿದೆ.
ಇನ್ನು ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.