ಬೆಂಗಳೂರು: ಶುಕ್ರವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ.
ಸಂಜೆ ನಾಲ್ಕು ಗಂಟೆ ಹೊತ್ತಿಗೆ ಶುರುವಾರ ಮಳೆ ಕತ್ತಲಾಗುತ್ತಿದ್ದಂತೆ ಪ್ರಕೋಪ ತಾಳಿತು. ಅದರಲ್ಲೂ ಹೊಸಕೆರೆ ಹಳ್ಳಿಯ ಪ್ರಮೋದ್ ಲೇಔಟ್ ಸಂಪೂರ್ಣ ಜಲಾವೃತಗೊಂಡಿದೆ. ರಾಜಕಾಲುವೆಯ ತಡೆಗೋಡೆ ಕುಸಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮೋದ್ ಲೇಔಟ್‍ವೊಂದರಲ್ಲೇ 300ಕ್ಕೂ ಹೆಚ್ಚು ಮನೆಗಳು ನೀರಿನಲ್ಲಿ ಮುಳುಗಿವೆ.

ಪ್ರಮೋದ್ ಲೇಔಟ್‍ನ ಮನೆಯೊಂದು ನೀರಿನಲ್ಲಿ ಸಂಪೂರ್ಣ ಮುಳುಗಿದ್ದು, ಮನೆಯಲ್ಲಿದ್ದ ಎರಡು ಹಸುಗೂಸುಗಳನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಗಂಟಲು ಮಟ್ಟದವರೆಗಿನ ನೀರಿನಲ್ಲೇ ಹಸುಗೂಸನ್ನು ಬೇರೊಂದು ಮನೆಗೆ ಸ್ಥಳಾಂತರ ಮಾಡಿದ ವಿಡಿಯೋ ನೋಡಿದರೆ ಕರುಳು ಚುರುಕ್ ಎನ್ನುತ್ತದೆ.


ಪ್ರಮೋದ್ ಲೇಔಟ್‍ನ ದತ್ತಾತ್ರೇಯ ದೇವಸ್ಥಾನ ಸಂಪೂರ್ಣ ಮುಳುಗಿದ್ದು, ವಿಗ್ರಹಗಳನ್ನು ಸ್ಥಳಾಂತರ ಮಾಡಲಾಗಿದೆ.
ಪ್ರವಾಹ ಪೀಡಿತ ಸ್ಥಳಕ್ಕೆ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ತಂಡಗಳು ಧಾವಿಸಿ ಬೋಟ್‍ಗಳ ಮೂಲಕ ನೀರಿನಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿ ಸುರ್ಷಕಿತ ಸ್ಥಳಗಳಿಗೆ ಸ್ಥಳಾಂತರ ಮಾಡಿವೆ.
ಕೋರಮಂಗಲದ ಹಲವು ಬಡಾವಣೆಗಳು ನೀರಿನಲ್ಲಿ ಮುಳುಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬಸವನಗುಡಿಯ ನ್ಯಾಶನಲ್ ಕಾಲೇಜು ಬಳಿಯ ರಸ್ತೆ ಅಕ್ಷರಶಃ ನದಿಯಂತಾಗಿತ್ತು. ಕೆಂಗೇರಿಯ ಮೈಸೂರು ರಸ್ತೆಯಲ್ಲು ಭಾರಿ ಪ್ರಮಾಣದಲ್ಲಿ ನೀರು ನಿಂತ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬೆಂಗಳೂರು ನಗರದ ಬಹುತೇಕ ಕಡೆ ಭಾರಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮನೆ ತಲುಪಲು ಜನರು ಹರಸಾಹಸ ನಡೆಸಿದರು.

ಪದ್ಮನಾಭ ನಗರದ ಪ್ರವಾಹ ಪೀಡಿದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








