Heavy Rain | ಕಂಪ್ಲಿ ಸೇತುವೆ ಮುಳುಗಡೆಗೆ ಕ್ಷಣಗಣನೆ
ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಹಿನ್ನಲೆಯಲ್ಲಿ ಕಂಪ್ಲಿ ಸೇತುವೆ ಮುಳುಗಡೆಯಾಗುವ ಹಂತಕ್ಕೆ ಬಂದಿದೆ.
ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕಜಂತಗಲ್ ಗ್ರಾಮದ ಬಳಿ ಇರುವ ಸೇತುವೆ ಇದಾಗಿದ್ದು, ಸೇತುವೆ ಮುಳುಗಡೆಗೆ ಕೆಲವೇ ಅಡಿಗಳು ಮಾತ್ರ ಬಾಕಿ ಇದೆ.
ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ.

ಪ್ರತಿ ಬಾರಿ ಮಳೆಗಾಲ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತಲೇ ಇರುತ್ತದೆ.
ಇದರಿಂದ ಎರಡು ಜಿಲ್ಲೆಯ ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.
ಹೀಗಾಗಿ ಸೇತುವೆ ಮೇಲ್ದರ್ಜೆಗೆ ಏರಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ರೂ ಶಾಸಕರು ಈ ಬಗ್ಗೆ ಸ್ಪಂದಿಸಿಲ್ಲ ಎಂದು ಸ್ಥಳೀಯರ ಆರೋಪವಾಗಿದೆ.