ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ – ಹಲವು ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ
ನವದೆಹಲಿ : ಕೆಲ ದಿನಗಳಿಂದ ರಾಜ್ಯದಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಲೇ ಇದೆ.. ಈ ನಡುವೆ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ( ಸೆಪ್ಟೆಂಬರ್ 7 – ಸೆಪ್ಟೆಂಬರ್ 8) ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ದಕ್ಷಿಣ ಭಾರತದಲ್ಲಿ ಈ ವಾರವಿಡೀ ಗುಡುಗು ಮಿಶ್ರಿತ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಅರಬ್ಬೀ ಸಮುದ್ರದಿಂದ ಬೀಸುವ ಆರ್ದ್ರ ಮಾರುತಗಳು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ ಎನ್ನಲಾಗ್ತಿದೆ.
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ , ಕೊಡಗು , ಶಿವಮೊಗ್ಗ ,ಬೆಂಗಳೂರು ಗ್ರಾಮಾಂತರ , ಬೆಂಗಳೂರು , ಚಿಕ್ಕಬಳ್ಳಾಪುರ , ಕೋಲಾರ , ರಾಮನಗರ , ಚಿಕ್ಕಮಗಳೂರು , ಚಾಮರಾಜನಗರ, ಮೈಸೂರು, ಬಳ್ಳಾರಿ, ಚಿತ್ರದುರ್ಗ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ದಾವಣಗೆರೆ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ , ಹಾವೇರಿ, ಕೋಲಾರ, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.