ರಾಜ್ಯದಲ್ಲಿ ಮುಂದಿನ ವಾರದಿಂದ ವರುಣನ ಆರ್ಭಟ – ರೆಡ್ ಅಲರ್ಟ್
ಬೆಂಗಳೂರು : ರಾಜ್ಯಾದ್ಯಂತ ಹಲವೆಡೆ ಮುಂದಿನ ವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ.. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ ಎನ್ನಲಾಗಿದೆ.. ಹೀಗಾಗಿ ಈ ಪ್ರದೇಶಗಳಲ್ಲಿ ಜೂನ್ 13 ಹಾಗೂ 14 ರಂದು ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ ಜೂನ್ 14 ಸೋಮವಾರದಂದು 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದ್ದು. ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಬಿರುಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಜೂನ್ 10, 11, 12ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾನುವಾರದಿಂದ ಮಳೆಗಾಲದ ಮಳೆ ತೀವ್ರಗೊಳ್ಳಲಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜೂನ್ 13, 14 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಜೂನ್ 9 ರಿಂದ 13 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.