ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 6-7 ದಿನಗಳ ಕಾಲ ಭಾರೀ ಮಳೆ
ನವದೆಹಲಿ : ದೇಶದಲ್ಲಿ ಮುಂಗಾರು ವೇಗ ಪಡೆದಿದ್ದು, ಈಗಾಗಲೇ ಮಹಾರಾಷ್ಟ್ರ , ಕರ್ನಾಟಕದ ಕೊಡು , ದಕ್ಷಿಣ ಕರ್ನಾಟಕ ಭಾಗದಲ್ಲಿ ನಿರಂತರವಾಗಿ ಮಳೆಯಾಗ್ತಿದೆ.. ಇನ್ನೂ ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 6-7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜುಲೈ 17ರಿಂದ 20ರವರೆಗೆ ಹಿಮಾಲಯದ ಪ್ರದೇಶಗಳು ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇನ್ನೂ ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶದಲ್ಲಿ ಜುಲೈ 18ರಿಂದ 20ರವರೆಗೆ ಮಳೆಯಾಗಲಿದೆ. ದೆಹಲಿಯಲ್ಲಿ ಜುಲೈ 18ರಂದು ಹೆಚ್ಚಿನ ಮಳೆಯಾಗಲಿದೆ. ಉತ್ತರ ಪ್ರದೇಶದಲ್ಲಿ ಜುಲೈ 18ರಂದು, ಜಮ್ಮುವಿನಲ್ಲಿ ಜುಲೈ 19ರಂದು, ಉತ್ತರಾಖಂಡದಲ್ಲಿ ಜುಲೈ 18 ಹಾಗೂ 19ರಂದು ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಗುಜರಾತ್, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. ಪಶ್ಚಿಮ ಕರಾವಳಿಯಲ್ಲಿಯೂ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.