Heavy rain – ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ
ಧಾರವಾಡ : ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು, ಉತ್ತರ ಕರ್ನಾಟಕದ ಒಳನಾಡಿನಾದ್ಯಂತ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೀಗಾಗಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೇ ಮುಂದಿನ ಐದು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಹಾಗೂ ಹಲವೆಡೆ ಲಘು ಮಳೆಯಾಗುವ ಸಾಧ್ಯತೆಗಳಿವೆ.
ಸದ್ಯ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ಬೆಳೆ ನಾಶವಾಗಿದೆ.
ಸದ್ಯ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕಟಾವಿಗೆ ಬಂದ ಬೆಳೆಗೆ ಹಾನಿಯಾಗುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.